ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಗಾಳಿಯ ದಿಕ್ಕಿನ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಇದರ ಪರಿಣಾಮವಾಗಿ ಮಳೆ ಹೆಚ್ಚುವ ಸಾಧ್ಯತೆ ಇದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 28 ರಂದು ಈ ವಾಯುಭಾರ ಕುಸಿತ ಮಹಾರಾಷ್ಟ್ರ ಪ್ರವೇಶಿಸಬಹುದು. ನಂತರ ಸೆ.29 ಮತ್ತು 30 ರಂದು ಮುಂಬಯಿ ಕರಾವಳಿ ತಲುಪುವ ಸಾಧ್ಯತೆ ಇದೆ. ಇದರ ಪರಿಣಾಮ ಮುಂಬಯಿಯಿಂದ ಕೇರಳ ಕರಾವಳಿವರೆಗೆ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಮಳೆಯ ಮುನ್ಸೂಚನೆ ಹಾಗೂ ಎಚ್ಚರಿಕೆಗಳು
ಸೆಪ್ಟೆಂಬರ್ 27: ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
ಸೆಪ್ಟೆಂಬರ್ 28: ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್.
ಸೆಪ್ಟೆಂಬರ್ 29: ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್.
ಕರಾವಳಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಒಂದು ವಾರದಿಂದ ಮಳೆ ತಗ್ಗಿದ್ದರೂ, ಇದೀಗ ಮತ್ತೆ ಮಳೆಯ ಚಟುವಟಿಕೆ ಚುರುಕಾಗಿದೆ.
ಇತ್ತೀಚಿನ ಮಳೆ ಅಳತೆಗಳು
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ – 6 ಸೆಂ.ಮೀ.
ಯಾದಗಿರಿ ಜಿಲ್ಲೆಯ ಹುಣಸಗಿ, ಕಕ್ಕೇರಿ, ಕೆಂಬಾವಿ ಮತ್ತು ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ತಲಾ – 5 ಸೆಂ.ಮೀ.
ಬೀದರ್ ಜಿಲ್ಲೆಯ ಔರಾದ್‌ನಲ್ಲಿ – 4 ಸೆಂ.ಮೀ.