ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಅವರು ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ವತಿಯಿಂದ ಬಿ ವಿ ಶ್ರೀನಿವಾಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 30 ಸಾವಿರ ನೋಟ್ ಬುಕ್ ಗಳಿಂದ ರಾಹುಲ್ ಗಾಂಧಿ ಅವರ ಭಾವಚಿತ್ರ ಬಿಡಿಸಿರುವುದನ್ನು ವೀಕ್ಷಿಸಿ, ವಿಶೇಷ ಚೇತನ ಕ್ರೀಡಾಪಟುಗಳಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ಸೈಕಲ್, ಗಾಲಿ ಕುರ್ಚಿ, ಲ್ಯಾಪ್ ಟಾಪ್ ವಿತರಣೆ ಮಾಡಿದರು.