ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತ ಏಳುವ ಸಾಧ್ಯತೆ ಇದೆ, ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯಾದ್ಯಂತ 6 ದಿನ ಭಾರಿ ಸುರಿಯುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ನಂತರ ಚದುರಿದ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಘುಮಳೆಯೊಂದಿಗೆ
ಮೋಡ ಕವಿದ ಹವಾಮಾನ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಸಾಧ್ಯತೆಯಿದ್ದು, ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಧ್ಯಮ ಮಳೆ ಸುರಿಯಲಿದ್ದು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ 3-6 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.