Menu

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗ್ತಾರೆ.  ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ, ಸಿದ್ದರಾಮಯ್ಯ ಬಳಿಕ ಅವರೇ ಆಗಬೇಕಲ್ವಾ, ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಪ್ರಶ್ನಿಸಿದರು. ಆದರೆ ಈ ಅವಧಿಯಲ್ಲೇ ಆಗ್ತಾರ ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೋ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲ ಮುಖ್ಯಮಂತ್ರಿ ಮಾಡುವುದಕ್ಕೆ ಆಗುವುದಿಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Related Posts

Leave a Reply

Your email address will not be published. Required fields are marked *