ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ.
ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ. ರಾಮಕೃಷ್ಣಪ್ಪ ಬೂರಗಮಾಕಲಹಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಈ ಘಟನೆಯಿಂದ ಶಿಕ್ಷಕ ಸಮುದಾಯ ಹಾಗೂ ಸ್ಥಳೀಯರು ಆಘಾತಗೊಂಡಿದ್ದಾರೆ.
ಚಿಂತಾಮಣಿ ನಗರದಲ್ಲಿ ನಡೆಯುತ್ತಿದ್ದ ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ರಾಮಕೃಷ್ಣಪ್ಪ ಅವರಿಗೆ ಹಠಾತ್ ಹೃದಯಾಘಾತ ಆಗಿ ಕುಸಿದಿದ್ದಾರೆ, ಸಹೋದ್ಯೋಗಿಗಳು ಅವರನ್ನು ಮುರಗಮಲ್ಲ ಗ್ರಾಮದ ಪ್ರಾಥಮಿಕ ಆಸ್ಪತ್ರೆಗೆ
ಕಳುಹಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ನಗರದ ಡೆಕನ್ ಆಸ್ಪತ್ರೆಗೆ ಕರೆತರಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.