Menu

ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ಐದು ವರ್ಷದ ಬಾಲಕನ ಕೊಲೆ

ತಮಿಳುನಾಡಿನ ಕಾಂಚಿಪುರಂನಲ್ಲಿ ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ 5 ವರ್ಷದ ಬಾಲಕನನ್ನು ಹೊಡೆದು ಕೊಂದಿರುವ ಘಟನೆ ಬಹಿರಂಗಗೊಂಡಿದೆ.

ಆರೋಪಿ ಅಸ್ಸಾಂ ಮೂಲದ ಬೋಲ್ದೇವ್ ಮಸುವಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಕರುಮಂಗಝನಿ ಮೂಲದ ದಂಪತಿ ಕೆಲಸಕ್ಕೆಂದು ಕಾಂಚಿಪುರಂಗೆ ವಲಸೆ ಬಂದಿದ್ದರು. ಬಾಲಕ ಜೂನ್ 9ರಂದು ನಾಪತ್ತೆಯಾಗಿದ್ದ. ಪೋಷಕರು ದೂರು ನೀಡಿದ ಬಳಿಕ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಕೆಲವು ದಿನಗಳ ನಂತರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಗುವಿನ ಕೊಳೆತ ಶವ ಪತ್ತೆಯಾಗಿತ್ತು.

ಬಾಲಕ ಬಿದ್ದು ತಲೆಗೆ ಗಾಯವಾಗಿ ಮೃತಪಟ್ಟಿರಬಹುದೆಂದು ಎಂದು ಪೊಲೀಸರು ಶಂಕಿಸಿದ್ದರು, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬಾಲಕನನ್ನು ಮಸುವಾ ಕರೆದುಕೊಂಡು ಹೋಗುತ್ತಿದ್ದ ಸುಳಿವು ಆಧರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಯು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Related Posts

Leave a Reply

Your email address will not be published. Required fields are marked *