ಇರಾನ್‌ನ ಮೂರು ಪ್ರಮುಖ ಪರಮಾಣು ನೆಲೆಗಳ ಮೇಲೆ ಅಮೆರಿಕ ವಾಯುದಾಳಿ ನಡೆಸಿದ ನಂತರ ಪ್ರತಿದಾಳಿಯ ಆತಂಕದಿಂದ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಸೇರಿದಂತೆ ಪ್ರಮುಖ ಅಮೇರಿಕದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಅಮೆರಿಕ ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿದ್ದಲ್ಲದೆ ನೀವು ಪ್ರತೀಕಾರ ತೀರಿಸಿಕೊಳ್ಳಲು ಮುಂದಾದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಆ ಎಚ್ಚರಿಕೆ ಮೀರಿ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಹೀಗಾಗಿ ಅಮೆರಿಕ ಆತಂಕಗೊಂಡು ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಿದೆ.
ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಯುಎಸ್ ಬಾಂಬ್ ದಾಳಿಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.
ಇರಾನ್‌ನ ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ಮಾಡಿದ ನಂತರ ಇಸ್ರೇಲ್ ತನ್ನ ದೇಶದ ವಾಯುಪ್ರದೇಶವನ್ನು ಮುಚ್ಚಿದೆ. ಇದೀಗ ಅಮೆರಿಕದ ಪ್ರತಿಯೊಬ್ಬ ಪ್ರಜೆ ನಮ್ಮ ಟಾರ್ಗೆಟ್ ಎನ್ನುವ ಘೋಷವಾಕ್ಯಗಳು ಇರಾನ್‌ನಲ್ಲಿ ಕೇಳಿ ಬರುತ್ತಿವೆ. ಅಮೆರಿಕ ದಾಳಿಯನ್ನು ಇರಾನ್ ಮಾಧ್ಯಮಗಳು ಖಂಡಿಸಿದೆ.
ಇರಾನ್ ಮೇಲಿನ ದಾಳಿಗೆ ಸೇಡು ತೀರಿಸಿಕೊಳ್ಳುತ್ತೇವೆ. ಅಮರಿಕದ ಪ್ರಜೆ, ಅಮೆರಿಕ ಮಿಲಿಟರಿಯ ಪ್ರತಿಯೊಬ್ಬ ಯೋಧನು ಇರಾನಿಗಳ ಟಾರ್ಗೆಟ್. ಈ ಯುದ್ಧ ಮತ್ತೊಂದು ಹಂತಕ್ಕೆ ಸಾಗಲಿದೆ ಎಂದು ಇರಾನ್ ಮಾಧ್ಯಮಗಳು ಎಚ್ಚರಿಕೆ ನೀಡಿವೆ.