Menu

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಅಕ್ಟೋಬರ್‌ 2 ಗಾಂಧಿ ಜಯಂತಿಯಂದು ಬೆಂಗಳೂರಿನ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸದ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ.

ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ತತ್ವಗಳಾದ ಅಹಿಂಸೆ ಮತ್ತು ಕರುಣೆಯನ್ನು ಗೌರವಿಸುವ ಭಾಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು, ಮಾಂಸ ಮಾರಾಟದ ಮಳಿಗೆಗಳು ಮತ್ತು ಸಂಬಂಧಿಸಿದ ವ್ಯಾಪಾರಗಳಿಗೆ ಈ ಆದೇಶವು ಅನ್ವಯವಾಗಲಿದೆ.

ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಬಿಎ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಆದೇಶದಲ್ಲಿ ತಿಳಿಸಿದೆ. ಈ ನಿಷೇಧವು ಒಂದು ದಿನಕ್ಕೆ ಮಾತ್ರ ಸೀಮಿತವಾಗಿರುತ್ತದೆ.

Related Posts

Leave a Reply

Your email address will not be published. Required fields are marked *