ರಾಜ್ಯದಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಸ್ವಿಗಿ ಝೊಮೊಟೋದಂಥ ಡೆಲಿವರಿ ಬೈಕ್ ಗೆ ಕಡಿವಾಣ ಬೀಳಲಿದೆ. ಈ ಕ್ರಮದಿಂದ ಗಿಗ್ ಕಾರ್ಮಿಕರಲ್ಲಿ ಆತಂಕ ಶುರುವಾಗಿದೆ. ಅಮೆಜಾನ್, ಸ್ಲಿಪ್ಕಾರ್ಟ್, ಸ್ವಿಗ್ಗಿ, ರೊಮೆಟೋ ನಂಥ ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆಯಾಗಲಿದೆ.
ಗಿಗ್ ಕಾರ್ಮಿಕರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕೇಂದ್ರ ಸಾರಿಗೆ ಸಚಿವಾಲಯ ಈ ಕ್ರಮಕ್ಕೆ ಮುಂದಾಗಿದೆ. ಸಂಚಾರ ನಿಯಮ ಉಲ್ಲಂಘನೆ, ಸಾರ್ವ ಜನಿಕ ಸುರಕ್ಷತಾ ಅಪಾಯ, ನಗರ ಸಂಚಾರ ದಟ್ಟಣೆ ಗಮನದಲ್ಲಿರಿಸಿ , ಇ-ಕಾಮರ್ಸ್ ಮತ್ತು ಕ್ವಿಕ್ -ಕಾಮರ್ಸ್ ಪ್ಲಾಟ್ಫಾರ್ಮ್ ಗಿಗ್ ಕಾರ್ಮಿಕರು ಖಾಸಗಿ ವಾಹನ ಬಳಸುತ್ತಿರುವ ಕುರಿತು ಕೇಂದ್ರ ಸಾರಿಗೆ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.
ವಿಮೆ, ತೆರಿಗೆ, ನೋಂದಣಿ ವಿಚಾರ, ಸಂಚಾರಿ ನಿಯಮ ಉಲ್ಲಂಘನೆ ಆದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಬಹುತೇಕ ಖಾಸಗಿ ವಾಹನಗಳ ಕಮರ್ಷಿಯಲ್ ಬಳಕೆಗೆ ಕಡಿವಾಣ ಬೀಳುವ ಸಾಧ್ಯತೆ ಇದೆ.