ಆಂಧ್ರಪ್ರದೇಶದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 10ಲಕ್ಷ ಮೌಲ್ಯದ 11ಕೆ.ಜಿ ಗಾಂಜಾ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.
ಅರುಣ್ ಕುಮಾರ್(29) ಸಂಜಯ್(23) ಗೋಕುಲ್(29) ಬಂಧಿತ ಆರೋಪಿಗಳು. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.