ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾಗದೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜೂ.13ರಂದು ಈ ಘಟನೆ ನಡೆದಿದ್ದು, ಸೆಲ್ಫಿ ವೀಡಿಯೊ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವೀಡಿಯೊದಲ್ಲಿ ಹೇಳಿದ್ದಾನೆ. ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನ್ಯಾಯ ಕೂಡಿಸುವಂತೆ ಕೇಳಿದ್ದಾನೆ.
ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವೀಡಿಯೊ ಮಾಡಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ತಲೆ ಮರೆಸಿಕೊಂಡಿದ್ದಾರೆ.