Menu

ಯುವತಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿದ ಪೊಲೀಸರಿಬ್ಬರು ಅರೆಸ್ಟ್‌

ತಮಿಆಳುನಾಡಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ಸುಂದರ್ ಮತ್ತು ಸುರೇಶ್ ರಾಜ್ .

19 ವರ್ಷದ ಯುವತಿ ಬೈಪಾಸ್ ರಸ್ತೆಯಲ್ಲಿ ಇಬ್ಬರು ಪುರುಷರು ಮತ್ತು ಇನ್ನೊಬ್ಬ ಮಹಿಳೆಯೊಂದಿಗೆ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಕಾನ್ಸ್ಟೇಬಲ್‌ಗಳಾದ ಸುಂದರ್ ಮತ್ತು ಸುರೇಶ್ ರಾಜ್ ಸಾಮಾನ್ಯ ತಪಾಸಣೆಗಾಗಿ ವಾಹನವನ್ನು ತಡೆದಿದ್ದರು. ನಂತರ ಇಬ್ಬರೂ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಬಲವಂತವಾಗಿ ಕರೆದುಕೊಂಡು ಹೋ ಆಕೆಯ ಮೇಲೆ ಅತ್ಯಾಚಾರ ಮಾಡಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಯುವತಿ ನಡೆದುಕೊಂಡು ತನ್ನ ಗ್ರಾಮ ತಲುಪಿದ ಬಳಿಕ ಸ್ಥಳೀಯರು ಆಕೆಯ ಸಹಾಯಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ದರು, ವೈದ್ಯರು ಚಿಕಿತ್ಸೆ ನೀಡಿದ ನಂತರ ಪೊಲೀಸರಿಗೆ ಪ್ರಕರಣದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪ್ರಾಥಮಿಕ ತನಿಖೆಯ ಬಳಿಕ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನ್‌ಸ್ಟೇಬಲ್‌ಗಳಾದ ಸುಂದರ್ ಮತ್ತು ಸುರೇಶ್ ರಾಜ್ ಅವರನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರಿಂದ ಇಂಥ ಕೃತ್ಯ ನಡೆದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಖಂಡಿಸಿ ಸಂತ್ರಸ್ತೆಗೆ ಸರಿಯಾದ ವೈದ್ಯಕೀಯ ಆರೈಕೆ ಸಿಗಬೇಕೆಂದು ಒತ್ತಾಯಿಸಿದ್ದಾರೆ. ಅಮಾನತುಗೊಂಡ ಪೊಲೀಸರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *