Menu

ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ: ಕೈ ನಾಯಕರಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರು ಸಹ ಮಾತನಾಡಬಾರದು. ಅವರಿಗೆ ನೋಟಿಸ್ ಕೊಡಲು ಹೇಳಿದ್ದೇನೆ ಎಂದರು.

ಪವರ್ ಶೇರಿಂಗ್ ಬಗ್ಗೆ ಎಲ್ಲಿ ಚರ್ಚೆ ಇದೆ? ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ, ಯಾರು ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡುವವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಮಾತಾಡಿದರೂ, ನನ್ನ ಪರವಾಗಿ ಮಾತಾಡಿದರೂ ಅದು ಡ್ಯಾಮೇಜ್ ಆಗುತ್ತೆ. ಇದರ ಬಗ್ಗೆ ಚರ್ಚೆ ಮಾಡಿದರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದಂತೆ ಎಂದು ಖಡಕ್​​​ ಆಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಬೇರೆ ರೀತಿ ಹೇಳಿದ್ದಾರೆ, ಅವರು ಹೇಳಿದಂತೆ ಹೈಕಮಾಂಡ್ ಮಾತೇ ಅಂತಿಮ. ಹೈಕಮಾಂಡ್​ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ನಮಗೆ ಪಕ್ಷ ಮುಖ್ಯ, ವ್ಯಕ್ತಿಯಲ್ಲ. ಪಕ್ಷ ಹೇಳಿದಂತೆ ಕೇಳಿಕೊಂಡು ಹೋಗುತ್ತೇವೆ ಅಂತ ಹೇಳಿದ್ದಾರೆ. ನೀವು ಹೇಳಿದ್ದು ನಮ್ಮ ಬಾಯಲ್ಲಿ ಹೇಳಿಸುವುದಕ್ಕೆ ಹೋಗಬೇಡಿ, ನಾನು ಮೂರ್ಖನಲ್ಲ ಎಂದಿದ್ದಾರೆ.

ಬಿಜೆಪಿ ಪಕ್ಷದರು ಅವರ ಪಾರ್ಟಿಯ ಕ್ರಾಂತಿಯ ಬಗ್ಗೆ ಚರ್ಚೆ ಮಾಡಿಕೊಂಡು ಹೋಗಲಿ. ನಾನು ಸೂಜಿ, ದಾರ ಬೇಕಾದರೆ ಕಳಿಸಿಕೊಡುತ್ತೇನೆ ಅವರು ಹೊಲೆದುಕೊಂಡು ಅವರ ಪಕ್ಷವನ್ನು ರೆಡಿ ಮಾಡಿಕೊಳ್ಳಲಿ ಎಂದು ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್​​ ವಾಗ್ದಾಳಿ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *