Menu

ಸಿರಾಜ್, ಬುಮ್ರಾ ಮಾರಕ ದಾಳಿ: 162 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್

siraj

ಅಹಮದಾಬಾದ್: ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 167 ರನ್ ಗೆ ಆಲೌಟಾಗಿದೆ.

ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ವೆಸ್ಟ್ ಇಂಡೀಸ್ ತಂಡ ಚಹಾ ವಿರಾಮಕ್ಕೂ ಮುನ್ನವೇ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗೆ ಗಂಟುಮೂಟೆ ಕಟ್ಟಿದೆ.

ಭಾರತ ತಂಡದ ದಾಳಿಗೆ ವಿಂಡೀಸ್ ತಂಡದ ಯಾವೊಬ್ಬ ಆಟಗಾರ ಗಟ್ಟಿಯಾಗಿ ನೆಲೆ ನಿಲ್ಲಲಿಲ್ಲ.  ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಕಳಪೆ ಮೊತ್ತಕ್ಕೆ ಪತನಗೊಂಡಿತು.

ವೆಸ್ಟ್ ಇಂಡೀಸ್ ಒಂದು ಹಂತದಲ್ಲಿ 42 ರನ್ ಗೆ 4 ವಿಕೆಟ್ ಕಳೆದುಕೊಂಡು 100ರ ಗಡಿ ದಾಟುವುದು ಕೂಡ ಕಷ್ಟ ಎಂಬ ಪರಿಸ್ಥಿತಿಗೆ ಸಿಲುಕಿತ್ತು. ಈ ಹಂತದಲ್ಲಿ ಜಸ್ಟಿನ್ ಗ್ರೀವ್ಸ್ (32 ರನ್, 48 ಎಸೆತ, 4 ಬೌಂಡರಿ) ಮತ್ತು ಶಾಯಿ ಹೋಪ್ (26 ರನ್, 36 ಎಸೆತ, 3 ಬೌಂಡರಿ) 5ನೇ ವಿಕೆಟ್ ಗೆ 48 ರನ್ ಜೊತೆಯಾಟವಾಡಿ ತಂಡದ ಮೊತ್ತವನ್ನು 100ರ ಗಡಿ ಸಮೀಪ ತಂದು ನಿಲ್ಲಿಸಿದರು.

ಏಷ್ಯಾಕಪ್ ನಲ್ಲಿ 17 ವಿಕೆಟ್ ಪಡೆದು ಮಿಂಚಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈ ಜೋಡಿಯನ್ನು ಬೇರ್ಪಡಿಸಿದ್ದೂ ಅಲ್ಲದೇ 2 ವಿಕೆಟ್ ಪಡೆದು ಗಮನ ಸೆಳೆದರು. ಮೊಹಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದರೆ, ಜಸ್ ಪ್ರೀತ್ ಬುಮ್ರಾ 3 ವಿಕೆಟ್ ಗಳಿಸಿದರು.

Related Posts

Leave a Reply

Your email address will not be published. Required fields are marked *