Menu

ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!

mysore dasara

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು.

ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ಮೂಲಕ ಜಂಬೂಸವಾರಿಗೆ ಅಧಿಕೃತ ಚಾಲನೆ ನೀಡಿದರು.

ಸಿಎಂ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು 6ನೇ ಬಾರಿ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿತು.

ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ 58 ಸ್ತಬ್ಧ ಚಿತ್ರಗಳು, 1500ಕ್ಕೂ ಹೆಚ್ಚು ಕಲಾವಿದರು ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದರ್ಉ. ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್‌ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್‌ ನೀಡುತ್ತಿವೆ.

ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

Related Posts

Leave a Reply

Your email address will not be published. Required fields are marked *