Wednesday, October 08, 2025
Menu

ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್‌. ಅಶೋಕ

ರಾಜ್ಯದ ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕ್ರಾಂತಿ ಅಂದಿದ್ದ ಒಬ್ಬರು ಸಚಿವರು ಮನೆಗೆ ಹೋಗಿದ್ದಾರೆ‌. ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ‌ ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುತ್ತಿಲ್ಲ, ಡಿಕೆ ಶಿವಕುಮಾರ್‌ ಹಠ ಬಿಡುತ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದರೆ ನಾವೇನೂ ಸರ್ಕಾರ ಮಾಡುವುದಿಲ್ಲ, ನಾವು ಚುನಾವಣೆಗೆ ಹೋಗಲು ಸಿದ್ಧ ಎಂದು ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕರೇ ಅನುದಾನ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಹಳ್ಳ ಇಲ್ಲದೇ ರಸ್ತೆ ತೋರಿಸಿದರೆ ಬಹುಮಾನ ಕೊಡಬಹುದು ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಮಳೆ ಹಾನಿ ಮತ್ತು ಬೆಳೆ ಹಾನಿ ವೀಕ್ಷಣೆಗೆ ಬಂದ ಬಿಜೆಪಿ ನಿಯೋಗ ಅತಿವೃಷ್ಟಿಯಿಂದ ಹಾಳಾದ ಪ್ರದೇಶಗಳಿಗೆ ಭೇಟಿ ನೀಡಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ಆರ್.ಅಶೋಕ್, ಎಂಎಲ್ಸಿಗಳಾದ ಸಿಟಿ ರವಿ, ಎನ್ ರವಿಕುಮಾರ್, ಸಂಸದ ರಮೇಶ್ ಜಿಗಜಿಣಗಿ ನೇತೃತ್ವದ ತಂಡದಿಂದ ಪರಿಶೀಲನೆ ನಡೆಯಿತು.

ಈರಣ್ಣಗೌಡ ಮೀಸಿಪಾಟೀಲ್ ಎಂಬವರ ಜಮೀನಿಗೆ ಭೇಟಿ ನೀಡಿದ ನಿಯೋಗ ಗದ್ದೆಯಲ್ಲಿ ಹಾಳಾದ ಗಜ್ಜರಿ ಬೆಳೆ ಹಾನಿ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡಿದೆ. ರಾಜ್ಯ ಬಿಜೆಪಿ ನಾಯಕರಿಗೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ‌ ಸಾಥ್ ನೀಡಿದರು.

Related Posts

Leave a Reply

Your email address will not be published. Required fields are marked *