ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಗುಜರಾತ್ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದ್ದು, ಶನಿವಾರ ಈ ಚಂಡಮಾರುತ ಇನ್ನಷ್ಟು ಬಲಗೊಳ್ಳಲಿದೆ. ಭಾರತೀಯ ಭೂಪ್ರದೇಶದ ಮೇಲೆ ಇದು ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿಲ್ಲ.
ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಗುಜರಾತ್ ಮೂಲಕ ಹಾದು ಹೋಗಲಿದ್ದು, ಚಂಡಮಾರುತದ ಪರಿಣಾಮ ಬಲವಾದ ಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಅಲ್ಪ ಪರಿಣಾಮ ಬೀರಲಿದ್ದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗಂಟೆಗೆ 8 ಕಿ.ಮೀ. ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಮಧ್ಯ ಅರಬ್ಬಿ ಸಮುದ್ರದ ಕಡೆಗೆ ಸಾಗುವ ನಿರೀಕ್ಷೆಯಿದೆ. ಭಾನುವಾರ ವೇಳೆಗೆ ಉತ್ತರ ಮತ್ತು ಪಕ್ಕದ ಮಧ್ಯ ಅರೇಬಿಯನ್ ಸಮುದ್ರದ ಮಧ್ಯ ಭಾಗಗಳನ್ನು ತಲುಪುವ ಸಾಧ್ಯತೆಯಿದೆ. ಗುಜರಾತ್ ತಲುಪುವ ಮುನ್ನ ಇದು ದುರ್ಬಲ ಆಗಬಹುದು. ಈ ಹಿನ್ನೆಲೆ ಮಳೆ ಹೊರತುಪಡಿಸಿ ಯಾವುದೇ ಆತಂಕ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.