Menu

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ಸಂಪರ್ಕ ಕಡಿತ

shiradi ghat

ಮಂಗಳೂರು: ಮುಂಗಾರು ಮಳೆ ಅಬ್ಬರಕ್ಕೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತ ಉಂಟಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.

ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್‌ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *