ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯೋಗ ಸೋಮವಾರ ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ.
ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಿಹಾರ ಚುನಾವಣೆಯ ದಿನಾಂಕವನ್ನು ಘೋಷಿಸಿದರು. 14 ಲಕ್ಷ ಹೊಸ ಮತದಾರರು ಸೇರಿದಂತೆ 7.43 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಮೊದಲ ಹಂತದಲ್ಲಿ ಬಿಹಾರ ಸೆಂಟ್ರಲ್ ಗೆ ಸೇರಿದ 121 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉಳಿದ 122 ಸ್ಥಾನಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದೆ.