ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವು ಏನೂ ಇಲ್ಲ. ಈ ವಿಚಾರದಲ್ಲಿ ಮುನ್ನೆಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲ ವಿರಕ್ತಮಠದ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಗಿಣಗೇರಾ ಏರ್‌ಸ್ಟ್ರಿಪ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದ ಸಚಿವ ತಂಗಡಗಿ ಹೇಳಿಕೆಗೆ ತಲೆದೂಗಿದರು.
ಕೆಮ್ಮಿನ ಔಷಧಿ ಕುರಿತು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ಪರಿಶೀಲನೆ ಕಾರ್ಯ ನಡೆದಿದೆ. ಮೇಲ್ಜಾತಿ ತುಳಿಯಲು ಸಮೀಕ್ಷೆ ಎಂಬ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸಮೀಕ್ಷೆ ವಿಚಾರದಲ್ಲಿ ಯಾರನ್ನು ತುಳಿಯುವ ಪ್ರಶ್ನೆ ಇಲ್ಲ. ಸಮ ಸಮಾಜ ನಿರ್ಮಾಣ ಮಾಡುವ ಉದ್ದೇಶ ನಮ್ಮದು. ಬದಲಾವಣೆ ಬೇಡ ಎಂದವರು ಸಮೀಕ್ಷೆ ವಿರೋಧಿಸುತ್ತಾರೆ. ರಾಜ್ಯದಲ್ಲಿ ಮಂಗಳವಾರ ಸಮೀಕ್ಷೆ ಮುಗಿಯುಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.