Wednesday, October 08, 2025
Menu

ಆಂಧ್ರಪ್ರದೇಶದ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಬೆಂಕಿಗೆ ಆರು ಕಾರ್ಮಿಕರು ಬಲಿ

ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಪಟಾಕಿ ತಯಾರಿಕೆ ಘಟಕವೊಂದರಲ್ಲಿ ಬೃಹತ್‌ ಸ್ಫೋಟ ಸಂಭವಿಸಿ ಆರು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕೆ ಕೇಂದ್ರದಲ್ಲಿ ಪಟಾಕಿ ತಯಾರಿಸುತ್ತಿದ್ದಾಗ ಈ ಅಗ್ನಿ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಮೃತರು ಮತ್ತು ಗಾಯಗೊಂಡವರನ್ನು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ ಮಾಹಿತಿ ನೀಡಿದ್ದಾರೆ.

ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಬೆಂಕಿ ದುರಂತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟು, ಏಳು ಮಂದಿ ಗಾಯಗೊಂಡ ಕೆಲವೇ ತಿಂಗಳುಗಳ ನಂತರ ಈ ದುರಂತ ನಡೆದಿದೆ.

Related Posts

Leave a Reply

Your email address will not be published. Required fields are marked *