Wednesday, October 08, 2025
Menu

ಕೊಪ್ಪಳದಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

koppal bjp leader

ಸ್ನೇಹಿತರ ಜೊತೆ ಊಟ ಮಾಡಿ ಹಿಂತಿರುಗುತ್ತಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಗಂಗಾವತಿ ನಗರದ ಕೊಪ್ಪಳ ರಸ್ತೆಯಲ್ಲಿ ವೆಂಕಟೇಶ ಕುರುಬರ (31) ಹತ್ಯೆಯಾಗಿದ್ದಾರೆ.

ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ವೆಂಕಟೇಶ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಬೀಳಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್‌ ಮರಳುತ್ತಿದ್ದಾಗ 7-8 ಜನ ಮಾರಾಕಾಸ್ತ್ರಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *