ತುಮಕೂರಿನ ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಕ್ಯಾಂಟರ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16), ಭಾನು ಕಿರಣ್ ಗೌಡ (14) ಮೃತಪಟ್ಟವರು.
ಮೃತ ಕುಟುಂಬ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್ನವರು ಎಂಬುರು ಪತ್ತೆಯಾಗಿದೆ. ಸಿಬೇಗೌಡ ಕುಟುಂಬ ಸಮೇತ ಮಾಗಡಿ ಪಟ್ಟಣದಲ್ಲಿ ವಾಸವಾಗಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಹಿರಿಯ ಮಗಳಿಗೆ ಮದುವೆ ಮಾಡಲಾಗಿದೆ.
ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿ ದ್ದಾರೆ. ಭಾನುಕಿರಣ್ ಗೌಡ ಕುಣಿಗಲ್ ಬಳಿ ಅರವಿಂದ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಭಾನುವಾರ ಅರವಿಂದ್ನನ್ನು ಶಾಲೆಯ ವಸತಿ ನಿಲಯಕ್ಕೆ ಬಿಟ್ಟು ಬರಲು ಸಿಬೇಗೌಡ ಕಾರಿನಲ್ಲಿ ಕುಟುಂಬ ಸಮೇತ ಬಂದಿದ್ದರು. ರಾತ್ರಿ 8:30 ಸುಮಾರಿಗೆ ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಕಾರನ್ನು ಯುಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.