ಕೋಲ್ಡ್ರಿಫ್ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ, ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಛಿಂದ್ವಾರಾ ಪೊಲೀಸರು ರಂಗನಾಥನ್ ಅವರನ್ನು ಹಿಡಿದುಕೊಟ್ಟವರಿಗೆ 20 ಸಾವಿರ ನೀಡುವುದಾಗಿ ಘೋಷಿಸಿತ್ತು.
ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಇನ್ನೂ ಮೂರು ಮಕ್ಕಳು ಮೃತಪಟ್ಟಿದ್ದು, ಸಾವಿನ ಸಂಖ್ಯೆ 20 ಕ್ಕೆ ಏರಿದೆ. ಐದು ಮಕ್ಕಳು ನಾಗ್ಪುರದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರು ಈ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದ್ದಾರೆ.
ಡಾ. ಪ್ರವೀಣ್ ಸೋನಿ ಸೇರಿದಂತೆ ಕೆಲವು ಖಾಸಗಿ ವೈದ್ಯರು ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ನೀಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಸಿರಪ್ ಸೇವಿಸಿದ ಕೆಲವೇ ಗಂಟೆಗಳಲ್ಲಿ ಮಕ್ಕಳು ಮೂತ್ರಪಿಂಡ ಸಮಸ್ಯೆಯಿಂದ ಬಳಲಲು ಪ್ರಾರಂಭಿಸಿ ಸ್ಥಿತಿ ಹದಗೆಟ್ಟು ಮೃತಪಟ್ಟಿವೆ. ವೈದ್ಯಕೀಯ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ವಿಷಕಾರಿ ರಾಸಾಯನಿಕ ಇರುವುದನ್ನು ದೃಢಪಡಿಸಿವೆ. ಅದು ದೇಹಕ್ಕೆ ಪ್ರವೇಶಿಸಿದಾಗ ಮೂತ್ರಪಿಂಡಗಳಿಗೆ ಹಾನಿಯಾಗುತ್ತಿತ್ತು ಎಂದು ತಿಳಿದು ಬಂದಿದೆ.