Thursday, October 09, 2025
Menu

ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ  ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಸಿಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅಂಗೀಕಾರ ನೀಡಲಾಗಿದೆ. ಮಹಿಳೆಯರ ಆರೋಗ್ಯ ಮತ್ತು ಕೆಲಸದ ಸ್ಥಳದಲ್ಲಿ ಅವರಿಗೆ ಬೇಕಾದ ವಿಶ್ರಾಂತಿಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

ಈ ಮಹತ್ವದ ನೀತಿಯನ್ನು ರೂಪಿಸಲು 18 ಸದಸ್ಯರ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಋತುಚಕ್ರದ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ಆಗುವ ಶಾರೀರಿಕ ಬದಲಾವಣೆಗಳು, ಅವರಿಗೆ ಎದುರಾಗುವ ಸಂಕಷ್ಟಗಳು ಮತ್ತು ವಿಶ್ರಾಂತಿಯ ಅಗತ್ಯವನ್ನು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ. ಶಿಫಾರಸಿನ ಆಧಾರದ ಮೇಲೆ ಕರ್ನಾಟಕ ಸರ್ಕಾರವು ಬಿಹಾರ, ಕೇರಳ ಮತ್ತು ಒಡಿಶಾ ರಾಜ್ಯಗಳ ರೀತಿಯಲ್ಲಿ ಈ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ರಜೆಯು ಮಹಿಳೆಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಕೆಲಸದ ಒತ್ತಡದಿಂದ ಮುಕ್ತವಾಗಿ ವಿಶ್ರಾಂತಿ ಪಡೆಯಲು ನೆರವಾಗಲಿದೆ.

ರಾಜ್ಯದ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆಯನ್ನು ಈ ಯೋಜನೆಯಡಿ ನೀಡಲಾಗುವುದು. ಈ ರಜೆಯು ಕಡ್ಡಾಯವಾಗಿದ್ದು, ಯಾವುದೇ ವೇತನ ಕಡಿತವಿಲ್ಲದೆ ಲಭ್ಯವಿರುತ್ತದೆ. ಸರ್ಕಾರಿ ಉದ್ಯೋಗಿಗಳಿಗೆ ಮಾತ್ರವಲ್ಲದೆ, ಖಾಸಗಿ ಕಂಪನಿಗಳು ಮತ್ತು ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ.

Related Posts

Leave a Reply

Your email address will not be published. Required fields are marked *