Menu

ಮೈಸೂರಿನಲ್ಲಿ ಬಲೂನ್‌ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್‌ ಗುಂಟೇಟು

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ ಪಡೆದಿದ್ದಾರೆ. ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಬುಧವಾರ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ. ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದಿದ್ದಾರೆ. ಆರೋಪಿಯ ಬಂಧನ ಆಗುತ್ತಿದ್ದಂತೆ ಹಲವರು ಕಠಿಣ ಕ್ರಮಕ್ಕೆ ಆಗ್ರಹಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದ್ದರೆ, ಇನ್ನು ಕೆಲವರು ಎನ್‌ಕೌಂಟರ್ ಮಾಡೇಕೆಂದು ಆಗ್ರಹಿಸಿದ್ದಾರೆ.

ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಇನ್ನು ಈ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದ, ನಾಲ್ಕು ತಿಂಗಳ ಹಿಂದೆ ಬಿಡುಗಡೆಯಾಗಿದ್ದ. ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.

Related Posts

Leave a Reply

Your email address will not be published. Required fields are marked *