ಆನ್‌ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ನಡೆಸಿದ್ದು, ಚಳ್ಳಕೆರೆಯಲ್ಲಿ ಪಪ್ಪಿಗೆ ಸೇರಿದ ಎರಡು ಬ್ಯಾಂಕ್ ಲಾಕರ್ ಜಪ್ತಿ ಮಾಡಿ 50 ಕೋಟಿ ರೂಪಾಯಿ ಮೌಲ್ಯದ 44 ಕೆಜಿ ಚಿನ್ನ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಆನ್‌ಲೈನ್ ಗೇಮಿಂಗ್ ಮತ್ತು ಹಣದ ವರ್ಗಾವಣೆಗೆ ಸಂಬಂಧಿಸಿದ ಆರೋಪಗಳ ಬಗ್ಗೆ ಇಡಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಈ ಕಾರ್ಯಾಚರಣೆಯಲ್ಲಿ ಇಡಿ ಅಧಿಕಾರಿಗಳು ಒಟ್ಟು 150 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಡಿ ಈ ಪ್ರಕರಣದಲ್ಲಿ ಇನ್ನಷ್ಟು ಸಾಕ್ಷ್ಯಗಳನ್ನು ಕಲೆಹಾಕುವ ಸಾಧ್ಯತೆಯಿದೆ.
ಪಪ್ಪಿಯ ಬ್ಯಾಂಕ್ ಲಾಕರ್‌ನಿಂದ ಇಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಿದೆ. ಈ ಹಿಂದೆ 30 ಕಡೆ ನಡೆದ ದಾಳಿ ನಡೆಸಿದ್ದ ಇಡಿ 150 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು, 12 ಕೋಟಿ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಜಪ್ತಿ ಮಾಡಿತ್ತು.
ಕ್ಯಾಸಿನೋವನ್ನು ಗುತ್ತಿಗೆಗೆ ನೀಡುವ ಕುರಿತ ಮಾತುಕತೆಗಾಗಿ ಸಿಕ್ಕಿಂನ ಗ್ಯಾಂಗ್ಟಕ್ಗೆ ತೆರಳಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಅಲ್ಲೇ ಇಡಿ ಅಧಿಕಾರಿಗಳು ಬಂಧಿಸಿದ್ದರು. ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿತ್ತು.