Menu

Accident Deaths: ದೊಡ್ಡಬಳ್ಳಾಪುರದಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಕಾರಿನಲ್ಲಿದ್ದ ನಾಲ್ವರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಲಾರಿ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗ್ಗೆ ದೇವಸ್ಥಾನಕ್ಕೆಂದು ಕಾರಿನಲ್ಲಿ 8 ಮಂದಿ ತೆರಳುತ್ತಿದ್ದಾಗ ನಡೆದ ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related Posts

Leave a Reply

Your email address will not be published. Required fields are marked *