Menu

Murder: ಆಸ್ಪತ್ರೆಯಲ್ಲಿ ಎಲ್ಲರ ಎದುರೇ ಯುವತಿಯ ಕತ್ತುಸೀಳಿ ಕೊಲೆಗೈದ ಯುವಕ

ಮಧ್ಯಪ್ರದೇಶದ ನರಸಿಂಗ್​​ಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಯೊಳಗೆ ಜೂನ್ 27ರಂದು 12ನೇ ತರಗತಿ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ಅಭಿಷೇಕ್ ಕೋಶ್ಟಿ ಎಂಬಾತ ಎಲ್ಲರ ಕಣ್ಣೆದುರೇ ಯುವತಿಯ ಕತ್ತು ಸೀಳಿ ಕ್ರೂರವಾಗಿ ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೊ ವೈರಲ್‌ ಆಗಿದೆ. ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಲ್ಲಿದ್ದ ಜನರು ಏನೂ ಮಾಡದೆ ನೋಡುತ್ತಲೇ ನಿಂತಿದ್ದರು. ಯಾರೂ ಸಹಾಯಕ್ಕೆ ಧಾವಿಸಿರಲಿಲ್ಲ. ಆರೋಪಿ 10 ನಿಮಿಷ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯನ್ನು ಕೊಂದ ಬಳಿಕ ತನ್ನ ಕತ್ತನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟು ವಿಫಲನಾಗಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಕೊಲೆ ನಡೆದ ಸಮಯದಲ್ಲಿ ಟ್ರಾಮಾ ಸೆಂಟರ್ ಹೊರಗೆ ಇಬ್ಬರು ಭದ್ರತಾ ಸಿಬ್ಬಂದಿ, ಒಳಗೆ, ವೈದ್ಯರು, ದಾದಿಯರು ಮತ್ತು ವಾರ್ಡ್ ಬಾಯ್ಸ್ ಸೇರಿದಂತೆ ಹಲವು ಸಿಬ್ಬಂದಿ ಇದ್ದರೂ ಯಾರೂ ಆತನನ್ನು ತಡೆಯಲಿಲ್ಲ.

ಅಂದು ವಿದ್ಯಾರ್ಥಿನಿ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಮನೆಯಿಂದ ಹೊರಟಿದ್ದಳು. ಆಸ್ಪತ್ರೆಯಲ್ಲಿ ಹೆರಿಗೆ ವಾರ್ಡ್​​ನಲ್ಲಿರುವ ಸ್ನೇಹಿತನ ಅತ್ತಿಗೆಯನ್ನು ಭೇಟಿಯಾಗುವು ದಾಗಿ ಮನೆಯವರಿಗೆ ತಿಳಿಸಿ ಹೋಗಿದ್ದಳು. ಅಭಿಷೇಕ್ ಮಧ್ಯಾಹ್ನದಿಂದ ಆಸ್ಪತ್ರೆಯ ಸುತ್ತಮುತ್ತ ಓಡಾಡುತ್ತಿದ್ದ. ಬಳಿಕ ಹತ್ಯೆ ಮಾಡಿದ್ದಾನೆ. ಆಕೆಯ ಕುಟುಂಬದ ವರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Related Posts

Leave a Reply

Your email address will not be published. Required fields are marked *