Menu

RCB victory tragedy: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ವಿರುದ್ಧ ಹೈಕೋರ್ಟ್‌ಗೆ ಸರ್ಕಾರ ಅರ್ಜಿ

ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಕ್ರಮದ ವಿರುದ್ಧ ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿದೆ. ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿತು.

ಪ್ರಕರಣ ಸಂಬಂಧ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ ಮನವಿ ಸಲ್ಲಿಸಿದ್ದರು. ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಆದೇಶ ನೀಡಿತ್ತು. ಸಿಎಟಿ ಆದೇಶದ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಆರ್​ಸಿಬಿಯ ವಿಜಯೋತ್ಸವ ಸಂದರ್ಭ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟು, 40 ಮಂದಿ ಗಾಯಗೊಂಡಿದ್ದರು.

Related Posts

Leave a Reply

Your email address will not be published. Required fields are marked *