ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ ಎಂದರು.
ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಲು ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.