ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡ ವ್ಯಕ್ತಿ ಮತ್ತು ಆತನ ಸ್ನೇಹಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ.
ಆರೋಪಿಗಳು ಅದೇ ಊರಿನ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಗೆ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ. ಮಂಚೇನಹಳ್ಳಿಯ ಯುವತಿ ಕೆಲಸ ಹುಡುಕಿಕೊಂಡು ಚಿಕ್ಕಬಳ್ಳಾಪುರ ನಗರಕ್ಕೆ ಬಂದಿದ್ದು, ನಂತರ ಊರಿಗೆ ಡೆದುಕೊಂಡು ಹೋಗುತ್ತಿದ್ದಾಗ ಈ ಕೃತ್ಯ ಎಸಗಲಾಗಿದೆ.
ಮಾರ್ಗಮಧ್ಯೆ ಆರೋಪಿ ಸಿಕಂದರ್ ಯುವತಿಗೆ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಚಿಕ್ಕಬಳ್ಳಾಪುರದಿಂದ ತನ್ನ ಸ್ನೇಹಿತ ಜನಾರ್ಧನ್‌ನನ್ನೂ ಅಲ್ಲಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ಬಳಿಕ ಆಕೆಯ ಬಳಿಯಿದ್ದ ಚಿನ್ನ ಕದ್ದು ಪರಾರಿಯಾಗಿದ್ದಾರೆ. ಯುವತಿಯನ್ನು ಪೆಟ್ರೋಲ್ ಬಂಕ್ ಬಳಿ ಬಿಟ್ಟುಹೋಗಿದ್ದಾರೆ. ಯುವತಿಯನ್ನು ಗಮನಿಸಿದ ಸ್ಥಲೀಯರು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.