ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿದಿದೆ, ಮಲೆನಾಡಿನ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಒಂದೇ ರಾತ್ರಿಗೆ ತುಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ.
ಶೃಂಗೇರಿಯ ಗಾಂಧಿಮೈದಾನದ ರಸ್ತೆಯಲ್ಲಿ ನೀರು ತುಂಬಿದ್ದು, ಪೊಲೀಸರು ರಸ್ತೆ ಬಂದ್‌ಗೊಳಿಸಿ ಬ್ಯಾರಿಕೇಡ್ ಹಾಕಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಮಳೆ ತೀವ್ರಗೊಂಡಿದ್ದು, ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಹೊಸನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಣೆ ನೀಡಲಾಗಿದೆ.
ಕೊಡಗಿನಲ್ಲಿ ಮಳೆ ಬಿಡುವು ನೀಡದ ಕಾರಣ ಸುರಕ್ಷತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.