ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.
ಬೆಂಗಳೂರಿನ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಟೂರ್ನಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ನೀರಜ್ ಚೋಪ್ರಾ ಗುರುವಾರ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಸೌಹಾರ್ದ ಭೇಟಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಮೈಸೂರು ಪೇಟ ತೊಡಿಸಿ ನೀರಜ್ ಚೋಪ್ರಾ ಅವರನ್ನು ಸನ್ಮಾನಿಸಿದರು. ಈ ವೇಳೆ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಉಪಸ್ಥಿತರಿದ್ದರು.