Menu

ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ: ಆರ್‌ ಅಶೋಕ್‌

ಸಿಎಂ ಸಿದ್ದರಾಮಯ್ಯನವರೇ , ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಆತಂಕವೋ , ಅದನ್ನು ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಹೇಳಿದ್ದಾರೆ.

ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಶೋಕ್‌ ಪೋಸ್ಟ್‌ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *