ಕೇಂದ್ರ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿಯಾಗಲಿದ್ದು, ನಿತಿನ್ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬೀದರ್ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್ ಮೀಟಿಂಗ್ನಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್ರಚನೆ ಮಾಡುವುದಾದರೆ ಮುಖ್ಯಮತ್ರಿ ಮತ್ತು ಉಪಮುಖ್ಯಮಂತ್ರಿಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ನಮಗೂ ಕೇಂದ್ರದ ʻನವಂಬರ್ ಕಾಂತ್ರಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಆರ್ಎಸ್ಎಸ್ ಬ್ಯಾನ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ, ಆರ್ಎಸ್ಎಸ್ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ. ಈ ಹಿಂದೇ 3 ಸಾವಿರ ಕೋಟಿ ಖರ್ಚು ಮಾಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದ್ದು, ಕಾಂಗ್ರೆಸ್ ಅವಧಿಯಲ್ಲಿ ಪ್ರತಿಮೆ ಮಾಡಲು ಬಿಜೆಪಿಯವರು ವಿರೋಧ ಮಾಡಿದ್ದರು ಎಂದು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ಗೆ ಗ್ಯಾರಂಟಿ ಭಾರದಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಲಾಡ್, ನಮ್ಮ ಗ್ಯಾರಂಟಿಗಳನ್ನು ಹಿಡಿದುಕೊಂಡೇ ಮೋದಿ ಓಡಾಡುತ್ತಿದ್ದಾರೆ. ಬಿಹಾರ್ ಎಲೆಕ್ಷನ್ನಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ 10 ಸಾವಿರ ರೂ. ಕೊಡುತ್ತಿದ್ದಾರೆ. ಮೋದಿ ಸಾಹೇಬರು ನಮ್ಮ ಗ್ಯಾರಂಟಿಗಳನ್ನು ಬಿಹಾರ ಚುನಾವಣೆಯಲ್ಲಿ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.