Menu

ಫೆರಾರಿ ಮಾಲೀಕನಿಗೆ 1.58 ಕೋಟಿ ತೆರಿಗೆ ಪಾವತಿಸಲು ಸಂಜೆವರೆಗೆ ಆರ್‌ಟಿಒ ಡೆಡ್‌ಲೈನ್‌

ತೆರಿಗೆ ವಂಚಿಸಿ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿದ್ದ ಐಷಾರಾಮಿ ಕಾರು ಮಾಲೀಕನಿಗೆ ಆರ್‌ಟಿಒ ಅಧಿಕಾರಿಗಳು 1.58 ರೂ. ಕೋಟಿ ಬಾಕಿ ತೆರಿಗೆ ಪಾವತಿಸಲು ಇಂದು ಸಂಜೆವರೆಗೆ ಡೆಡ್‌ಲೈನ್‌ ವಿಧಿಸಿದ್ದಾರೆ.

ಮಹಾರಾಷ್ಟ್ರ ರಿಜಿಸ್ಟ್ರೇಷನ್‌ ಹೊಂದಿದ ಏಳುವರೆ ಕೋಟಿ ರೂ. ಮೌಲ್ಯದ ಫೆರಾರಿ ಕಾರು ಮಾಲೀಕನೊಬ್ಬ ತೆರಿಗೆ ಪಾವತಿಸದೆ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಟ ನಡೆಸುತ್ತಿದ್ದ. ಮಹಾರಾಷ್ಟ್ರದಲ್ಲಿ 20 ಲಕ್ಷ ರೂ. ತೆರಿಗೆ ಪಾವತಿಸಿ 2023ರ ಸೆಪ್ಟೆಂಬರ್‌ನಿಂದಲೂ ರಾಜ್ಯದಲ್ಲಿ ಅನಧಿಕೃತ ಓಡಾಟದ ಬಗ್ಗೆ ಆರ್‌ಟಿಒಗೆ ಟ್ರಾಫಿಕ್‌ ಪೊಲೀಸರು ಮಾಹಿತಿ ನೀಡಿದ್ದರು. ಬೆಂಗಳೂರಿನ ಲಾಲ್‌ ಬಾಗ್‌ ಬಳಿ ಕಾರನ್ನು ತಡೆಹಿಡಿದ ಆರ್‌ಟಿಒ ಅಧಿಕಾರಿಗಳು ತಪಾಸಣೆ ನಡೆಸಿದಾಗ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ಮಾಲೀಕನ ನಿವಾಸದ ಮುಂದೆಯೇ ಮನೆ ಮುಂದೆಯೇ ಕಾರು ನಿಲ್ಲಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲೇ ಇದ್ದು ತೆರಿಗೆ ಪಾವತಿಸಲು ಸಂಜೆವರೆಗೆ ಕಾಲಾವಕಾಶ ನೀಡಿದ್ದಾರೆ. ಅಷ್ಟರಲ್ಲಿ 1.58 ಕೋಟಿ ತೆರಿಗೆ ಕಟ್ಟದೆ ಇದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲಿಯ ತನಕ ಕಾರು ಆರ್‌ಟಿಒ ಅಧಿಕಾರಿಗಳ ಸುಪರ್ದಿಯಲ್ಲೇ ಇರಲಿದೆ.

Related Posts

Leave a Reply

Your email address will not be published. Required fields are marked *