Thursday, October 16, 2025
Menu

ಕಾಂಗ್ರೆಸ್ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ: ಆರ್‌. ಅಶೋಕ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ ವಿಜಯಪುರ ಪುರಸಭೆಯ ದ್ವೀತಿಯ ದರ್ಜೆಯ ನೌಕರ ಪವನ್ ಜೋಷಿ ಸಾವಿಗೆ ಪುರಸಭೆ ಸದಸ್ಯ ಹನೀಫುಲ್ಲಾ, ಮಾಜಿ ಸದಸ್ಯ ಜೆ.ಎನ್‌. ಶ್ರೀನಿವಾಸ್ ಹಾಗೂ ಮುಖಂಡ ಮುನಿರಾಜು ಅವರ ಕಿರುಕುಳವೇ ಕಾರಣ ಎಂದು ಮೃತ ಪವನ್ ಜೋಶಿ ಅವರ ಪತ್ನಿ ಅನನ್ಯ ಆರೋಪಿಸಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಿರುಕುಳಕ್ಕೆ ಬಲಿಯಾದ ಸಿಬ್ಬಂದಿ, ಅಧಿಕಾರಿಗಳ ಸಂಖ್ಯೆ ಏರುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ.

ಪವನ್ ಜೋಶಿ ಅವರು ಪುರಸಭೆ ಸದಸ್ಯ ಹನಿಫುಲ್ಲಾ ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶವವನ್ನು ಪುರಸಭೆ ಮುಂದೆ ಇಟ್ಟು ಪ್ರತಿಭಟನೆ ನಡೆಸಲಾಗಿತ್ಗುತು, ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಈ ಕುರಿತಂತೆ ಪೋಸ್ಟ್‌ ಶೇರ್‌ ಮಾಡಿದ್ದು, ಜಾತಿಗಣತಿ ಸಮೀಕ್ಷೆಯ ಒತ್ತಡ ತಾಳಲಾರದೆ ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ಕಲಬುರಗಿ ಯಲ್ಲಿ ವೇತನ ಸಿಗದೆ ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಕಮಿಷನ್ ದಾಹಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗ ಬೇಕು ಎಂದು ಪ್ರಶ್ನಿಸಿದ್ದಾರೆ.

ಎಸ್ ಡಿಎ ಪವನ್ ಜೋಶಿ ಸಾವು ಪ್ರಕರಣದಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಬೇಕು, ಎಸ್‍ಐಟಿ ತನಿಖೆ ನಡೆಸಬೇಕು ಎಂದು ಸಿಎಂ @siddaramaiah ಹಾಗೂ ಗೃಹ ಸಚಿವ @DrParameshwara ಅವರನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *