ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ದಾವಣಗೆರೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡವರು. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೇ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಾಡ್ಜ್ ನಲ್ಲಿ ದುರ್ವಾಸನೆ ಬಂದ ಬಳಿಕ ಸಿಬ್ಬಂದಿ ಹೋಗಿ ನೋಡಿದಾಗ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಗೊತ್ತಾಗಿದೆ. ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜು ತಮಕೂರಿನ ಲಾಡ್ಜ್‌ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದೇಕೆ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ನಾಗರಾಜನ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದ್ದು, ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಮೂರು ಪುಟಗಳ ಡೆತ್ ನೋಟ್ ಬರೆದಿದ್ದು, ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ . ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.