Menu

ಅಮೆರಿಕದ ಟೆಕ್ಸಾಸ್ ನಲ್ಲಿ ಶತಮಾನದಲ್ಲೇ ಭೀಕರ ಪ್ರವಾಹ: 78ಕ್ಕೇರಿದ ಸಾವಿನ ಸಂಖ್ಯೆ

texas floods

ಅಮೆರಿಕದ ಟೆಕ್ಸಾಸ್‌ನಲ್ಲಿ ಶತಮಾನದಲ್ಲೇ ಕಂಡು ಕೇಳರಿಯದಂತ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ಮೃತಪಟ್ಟವರಲ್ಲಿ 28 ಮಕ್ಕಳು ಸೇರಿದ್ದು, 41 ಮಂದಿ ಕಾಣೆಯಾಗಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚಿನ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಪ್ರವಾಹದಿಂದಾಗಿ ವಿಷಪೂರಿತ ಹಾವುಗಳು ಭಾರೀ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರ ಆತಂಕ ಹೆಚ್ಚಿಸಿದೆ. ಅಲ್ಲದೇ ಇದರಿಂಧ ರಕ್ಷಣಾ ಕಾರ್ಯಕ್ಕೂ ಅಡ್ಡಿಯಾಗುತ್ತಿದೆ ಎಂದು ಹೇಳಲಾಗಿದೆ.

ಮೃತರಿಗೆ ಸಂತಾಪ ಸೂಚಿಸಿರುವ ಯುಎಸ್ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ನಿಜಕ್ಕೂ ಭಯಾನಕ, ದೇವರು ಜನರಿಗೆ ದುಃಖ ಬರಿಸುವ ಶಕ್ತಿ ಕೊಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ಪ್ರವಾಹ ಪೀಡಿತ ಟೆಕ್ಸಾಸ್‌ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಟೆಕ್ಸಾಸ್‌ನಾದ್ಯಂತ ಸುರಿದ 15 ಇಂಚು (38 ಸೆಂ.ಮೀ) ಮಳೆಯಿಂದಾಗಿ ಹಠಾತ್‌ ಪ್ರವಾಹ ಸಂಭವಿಸಿದೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವರೆಗೆ 850ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

Related Posts

Leave a Reply

Your email address will not be published. Required fields are marked *