Menu

ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು

yadagiri

ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಸಂಭವಿಸಿದೆ.

ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ದುರಾದೃಷ್ಟವಶಾತ್ ಸೋಮವಾರ ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.

ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Reply

Your email address will not be published. Required fields are marked *