Saturday, October 18, 2025
Menu

ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಪ್ರಯಾಣಿಕರು ಪಾರು

fire train

ಗರೀಬ್ ರಥ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಯುರಿದ ಘಟನೆ ಪಂಜಾಬ್‌ನಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ ಬೆಳಿಗ್ಗೆ 7.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಗೊಂದಲದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸುವಾಗ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Related Posts

Leave a Reply

Your email address will not be published. Required fields are marked *