ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮಾರಿಪಳ್ಳದಲ್ಲಿ ಪ್ರಿಯತಮೆಯ ಕೊಲೆಗೆ ಯತ್ನಿಸಿದ ಬಳಿಕ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೊಡ್ಮಣ್ ಗ್ರಾಮದ ನಿವಾಸಿ ಸುಧೀರ್(30) ಆತ್ಮಹತ್ಯೆ ಮಾಡಿಕೊಂಡಾತ. ಆತ ದಿವ್ಯಾ ಎಂಬ ಯುವತಿಯನ್ನು 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಕೆಲವು ತಿಂಗಳ ಹಿಂದೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದ್ದು, ಸೋಮವಾರ ದಿವ್ಯಾಳ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಆಕೆಯ ಹತ್ಯೆಗೆ ಯತ್ನಿಸಿ ಬಳಿಕ ತಾನೂ ಅದೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದಿವ್ಯಾ ಸುಧೀರ್‌ನಿಂದ ಅಂತರ ಕಾಯ್ದುಕೊಂಡಿದ್ದಳು. ಆದರೂ ಬಿಡದ ಆತ ದಿವ್ಯಾಳಿಗೆ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ. ದಿವ್ಯಾ ಇರುವ ಬಾಡಿಗೆ ಮನೆಗೆ ಆಗಮಿಸಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಬಳಿಕ ಇಬ್ಬರ ನಡುವೆ ಗಲಾಟೆಯಾಗಿದ್ದು, ದಿವ್ಯಾಳಿಗೆ ಚಾಕುವಿನಿಂದ ಇರಿದಿದ್ದಾನೆ. ದಿವ್ಯಾ ತಪ್ಪಿಸಿಕೊಂಡು ಹೋಗುವಾಗ ಬಿದ್ದು ಪ್ರಜ್ಞೆ ತಪ್ಪಿದ್ದಿದ್ದಾಳೆ. ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಸುಧೀರ್ ಮನೆಯೊಳಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಾಯಾಳು ದಿವ್ಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.