ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಭಾರತ ಮೂಲದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಗ್ರೀನ್ ಕೌಂಟಿಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ನಡೆದು ಈ ದುರಂತ ಸಂಭವಿಸಿದೆ.
ಹೈದರಾಬಾದ್ ಮೂಲದ ತೇಜಸ್ವಿನಿ, ವೆಂಕಟ್ ಮತ್ತು ಇಬ್ಬರು ಮಕ್ಕಳು ಮೃತಪಟ್ಟವರು. ಅಮೆರಿಕದ ಡಲ್ಲಾಸ್ನಲ್ಲಿ ವಾಸವಿದ್ದ ಈ ಕುಟುಂಬ ರಜೆಯ ನಿಮಿತ್ತ ಕಳೆದ ವಾರ ಅಟ್ಲಾಂಟಾದಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿತ್ತು.
ಸೋಮವಾರ ಅಟ್ಲಾಂಟಾದಿಂದ ಡಲ್ಲಾಸ್ಗೆ ಹಿಂತಿರುತ್ತಿದ್ದ ವೇಳೆ ಟ್ರಕ್ವೊಂದು ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಗುರುತುಗಳನ್ನು ಡಿಎನ್ಎ ಪರೀಕ್ಷೆಯ ಮೂಲಕ ಪತ್ತೆ ಮಾಡಿದ ಬಳಿಕ ಮೃತರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.