Menu

ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್‌ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್‌ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಾಕೆ. ಪಿಜಿಗೆ ಆಕೆಯ ಸ್ನೇಹಿತೆಯರು ಮರಳಿದಾಗ ಈ ದುರಂತ ಬೆಳಕಿಗೆ ಬಂದಿದೆ.

ಕಾಡುಸೊಣ್ಣಪ್ಪನಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಸೋಮವಾರಪೇಟೆ ಗರಗಂಡೂರು ಗ್ರಾಮದ ಗುತ್ತಿಗೆದಾರ ಅಬ್ದುಲ್‌ ನಜೀರ್ ಪುತ್ರಿ ಸನಾ ಪರ್ವಿನ್‌ ಓದುತ್ತಿದ್ದಳು. ಅದೇ ಕಾಲೇಜಿನ ಹಳೆಯ ವಿದ್ಯಾರ್ಥಿ ಕೇರಳದ ತ್ರಿಶೂರ್ ರಿಫಾಸ್‌ ಜತೆ ಸನಾ ಸ್ನೇಹವಾಗಿತ್ತು. ಸ್ನೇಹವು ಬಳಿಕ ಪ್ರೀತಿಗೆ ತಿರುಗಿತ್ತು. ರಿಫಾಸ್ ಜತೆ ವೈಯಕ್ತಿಕ ವಿಚಾರವಾಗಿ ಸನಾಳಿಗೆ ಜಗಳವಾಗಿತ್ತು.

ಬಳಿಕ ತನ್ನ ಸ್ನೇಹಿತರಿಗೆ ಕಾಲೇಜಿಗೆ ಬರುವುದಿಲ್ಲ ಎಂದು ಹೇಳಿ ಸನಾ ಪಿಜಿಯಲ್ಲೇ ಸನಾ ಉಳಿದಿದ್ದಳು. ಆಕೆ ಮತ್ತೆ ರಿಫಾಸ್‌ ಕರೆ ಮಾಡಿದ್ದಾನೆ. ಆದರೆ ಆಕೆ ಕರೆ ಸ್ವೀಕರಿಸಿಲ್ಲ, ಆತಂಕಗೊಂಡ ರಿಫಾಸ್‌, ಕೂಡಲೇ ಸ್ನೇಹಿತರಿಗೆ ಕರೆ ಮಾಡಿ ತಕ್ಷಣವೇ ಸನಾಳ ಪಿಜಿಗೆ ಹೋಗುವಂತೆ ಹೇಳಿದ್ದಾನೆ. ಸನಾ ಸ್ನೇಹಿತೆಯರ ಜತೆ ಪಿಜಿ ಬಳಿಗೆ ರಿಫಾನ್ ಸ್ನೇಹಿತರು ಬಂದಿದ್ದಾರೆ. ಅಷ್ಟರಲ್ಲಿ ನೇಣು ಬಿಗಿದುಕೊಂಡು ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮ್ಮ ಮಗಳ ಸಾವಿಗೆ ರಿಫಾಸ್‌ ಕಾರಣ ಎಂದು ಆರೋಪಿರುವ ಸನಾಳ ಪೋಷಕರು ಬಾಗಲೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ಮೃತಳ ಸ್ನೇಹಿತನ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಮ್ಮ ಮಗಳು ಸನಾಳಿಗೆ ಕರೆ ಹಾಗೂ ಮೆಸೇಜ್ ಮಾಡಿ ರಿಫಾಸ್‌ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ನಮಗೆ ಹೇಳಿದ್ದಳು. ಈ ವಿಷಯವನ್ನು ಕಾಲೇಜಿನ ಬಿಬಿಎ ವಿಭಾಗದ ಮುಖ್ಯಸ್ಥರಿಗೆ ತಿಳಿಸಿದ್ದೆವು. ಆಗ ರಿಫಾಸ್‌ನನ್ನು ಕರೆಸಿ ಸನಾಳ ತಂಟೆಗೆ ಹೋಗದಂತೆ ಎಚ್‌ಒಡಿ ಎಚ್ಚರಿಕೆ ಕೊಟ್ಟಿದ್ದರು. ನಂತರವು ಮಗಳಿಗೆ ಆತ ಕಿರುಕುಳ ಕೊಡುತ್ತಿದ್ದ. ಈತನ ಹಿಂಸೆ ಸಹಿಸಲಾರದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ನಜೀರ್ ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *