ಮುಂಬೈಯಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದು ಬಸ್‌ನಲ್ಲೇ ಸಿಕ್ಕಿಕೊಂಡ ಘಟನೆ ಯಲ್ಲಾಪುರದ ಹಳಿಯಾಳ ಕ್ರಾಸ್ ಬಳಿ ನಡೆದಿದೆ.
ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಲ್ಲಿ ಬಸ್‌ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ. ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಕುಡಿದ ಮತ್ತಿನಲ್ಲಿ ಗಲಾಟೆ ಬಿಲ್ ಕಲೆಕ್ಟರ್ ಗೆ ಚಾಕು ಇರಿತ
ನೆಲಮಂಗಲದಲ್ಲಿ ಇಬ್ಬರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಬಿಲ್ ಕಲೆಕ್ಟರ್ ಗೆ ಚಾಕು ಇರಿದಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೊನ್ನೇನಹಳ್ಳಿ ಪಂಚಾಯತಿ ಬಿಲ್ ಕಲೆಕ್ಟರ್ ವೀರಭದ್ರಸ್ವಾಮಿ ಇರಿತಕ್ಕೆ ಒಳಗಾದವರು. ಚಾಕು ಇರಿದಿರುವ ಸುರೇಶ್ ಹಾಗೂ ಶಿವಕುಮಾರ್.
ಗಾಯಳು ವೀರಭದ್ರಸ್ವಾಮಿಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆ ಗಲಾಟೆ ನಡೆದಿದ್ದು, ಅರೋಪಿಗಳ ಪತ್ತೆಗಾಗಿ ಶೋಧ ನಡೆಯುತ್ತಿದ್ದು, ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.