ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರು ಹೇಳಿಕೊಂಡು ಪರಿಚಿತ ಮಹಿಳೆಯರಿಗೆ 30 ಕೋಟಿ ರೂ. ವಂಚಿಸಿರುವ ಸವಿತಾ ಎಂಬಾಕೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಕಿಟ್ಟಿ ಪಾರ್ಟಿಯಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚರಯಿಸಿಕೊಂಡು ಸ್ನೇಹಿತೆಯರನ್ನಾಗಿಸಿಕೊಂಡು ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಂಡು ನಂಬಿಸಿ ನಿಧಾನವಾಗಿ ಅವರಿಂದ ಹೂಡಿಕೆ ನೆಪದಲ್ಲಿ ಹಣ ಪಡೆದುಕೊಳ್ಳುತ್ತಿದ್ದಳು. ಅಮೆರಿಕದಿಂದ ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಹೇಳಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಂಚಿಸಿದ್ದಳು.
ಹೀಗೆ ವಂಚನೆ ಪ್ರಕರಣದಡಿ ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ಕೇಸ್ ದಾಖಲಾಗಿ ಜೈಲಿಗೆ ಹೋಗಿದ್ದ ಸವಿತಾ, ಬೇಲ್ ಮೇಲೆ ಹೊರ ಬಂದು ಮತ್ತೆ ಅದೇ ಕೆಲಸ ಮಾಡುತ್ತಿದ್ದಳು. 20ಕ್ಕೂ ಹೆಚ್ಚು ಮಹಿಳೆಯರಿಗೆ 30 ಕೋಟಿ ರೂ.ಗಿಂತಲೂ ಹೆಚ್ಚು ವಂಚನೆ ಮಾಡಿದ್ದ ಆರೋಪದಡಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.