Menu

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಸೇರಿ ನಾಲ್ವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್​ ಜಾರಿಗೊಳಿಸುವಂತೆ ಹೈಕೋರ್ಟ್​ ಆದೇಶ ನೀಡಿದೆ.

ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿತು.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗಿರದ ಹಿನ್ನೆಲೆಯಲ್ಲಿ, ಈಗ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಮುಖ್ಯ ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ಸಂಚಲನ ಸೃಷ್ಟಿಸಿದ್ದ ಪ್ರಕರಣ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾದ ಆರೋಪ ಕೇಳಿಬಂದಿತ್ತು.  ಏಕೆಂದರೆ, ಸಿಎಂ ಪತ್ನಿ ಪಾರ್ವತಿ ಅವರಿಗೆ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರಕರಣ ದೊಡ್ಡ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್​ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್​​ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.

Related Posts

Leave a Reply

Your email address will not be published. Required fields are marked *