Saturday, October 25, 2025
Menu

ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು.

ಗಳಿಸಿದ ಸಂಪತ್ತಿನ ಅಲ್ಪಮೊತ್ತ ಸಮಾಜದ ಒಳಿತಿಗೆ ಬಳಸಿ

ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. . ಸಮಾಜದಲ್ಲಿ ಜಾತಿವ್ಯವಸ್ಥೆಯಿಂದ ಅಸಮಾನತೆಯಿದೆ. ಸಮಾನತೆಯನ್ನು ಸಾಧಿಸಿ ಸಮಸಮಾಜವನ್ನು ನಿರ್ಮಿಸಬೇಕಿದೆ. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಿ ಎಂದು ಭವಿಷ್ಯದ ವೈದ್ಯರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

Related Posts

Leave a Reply

Your email address will not be published. Required fields are marked *