ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ವಿಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ 2014ರ ಜು.19 ರಿಂದ 2019ರ ಜು.18ರ ವರೆಗೆ ವಚ್ಚಾ ಗ್ರಾಮದ ಸರ್ವೆ ನಂ.24/4 ರಲ್ಲಿ 2 ಎಕರೆಗೆ ಅನುಮತಿ ಪಡೆದು 8 ಎಕರೆಗಿಂತ ಹೆಚ್ಚಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ ಎಂದು ಸಂಜೀವಕುಮಾರ್ ತಿಪ್ಪಣ್ಣ ಜವಕರ್ ಎಂಬವರು ದೂರು ನೀಡಿದ್ದರು.
ಅಕ್ರಮ ಗಣಿಗಾರಿಕೆ ನಡೆದಿದೆ ಅನ್ನೋದು ತಿಳಿದುಬಂದಿದೆ. ಬಳಿಕ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ವರದಿ ಬಳಿಕ 25.30 ಕೋಟಿ ರೂ. ದಂಡ ಪಾವತಿಸುವಂತೆ ಮೂರು ಬಾರಿ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ.
ದಂಡ ಪಾವತಿಸುವಂತೆ ಬಂದಿರುವ ನೋಟಿಸ್ ಪ್ರಶ್ನಿಸಿ ಭಗವಂತ್ ಖೂಬಾ ಕಾನೂನು ಮೊರೆ ಹೋಗಿದ್ದಾರೆ.


